Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:10 - ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:10
26 ತಿಳಿವುಗಳ ಹೋಲಿಕೆ  

ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.


ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ,


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು, ಕುರುಬರು ಇರಲಿಲ್ಲವಲ್ಲಾ, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲವಲ್ಲಾ, ಅವರು ಸ್ವಂತ ಹೊಟ್ಟೆಯನ್ನು ನೋಡಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.


ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆದಕಾರಣ, ಕುರುಬರೇ ಯೆಹೋವನ ಮಾತನ್ನು ಕೇಳಿರಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು