Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:13 - ಕನ್ನಡ ಸತ್ಯವೇದವು J.V. (BSI)

13 ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವುಗಳ ಸ್ವಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಬೆಟ್ಟಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನು ಅವುಗಳನ್ನು ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:13
36 ತಿಳಿವುಗಳ ಹೋಲಿಕೆ  

ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಹೊಲಸಿನಿಂದ ಉದ್ಧರಿಸಿ ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ನೀವು ಕ್ಷಾಮದೇಶದವರೆಂದು ಜನಾಂಗಗಳು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು