Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:16 - ಕನ್ನಡ ಸತ್ಯವೇದವು J.V. (BSI)

16 ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:16
33 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಟಗರು ಕುರಿ ಹೋತ ಹೋರಿ ಅಂತು ಬಾಷಾನಿನ ಕೊಬ್ಬಿದ ಪಶುಗಳು ಅಂದರೆ ಬಲಿಷ್ಟರು, ಭೂಪತಿಗಳು ಇವರ ಮಾಂಸವೂ ರಕ್ತವೂ ನಿಮಗೆ ಸಿಕ್ಕುವವು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.


ಪುಷ್ಟರ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಜೀವನಕ್ಕಾಗುವವು, ಹುಲ್ಲುಗಾವಲಂತೆ ಕುರಿಗಳು ಅಲ್ಲಿ ಮೇಯುವವು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು