Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:17 - ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿ ಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಂದೆಯೇ, ನಾನು ಒಂದೊಂದು ಕುರಿಗಳ ನ್ಯಾಯತೀರಿಸುತ್ತೇನೆ. ಟಗರುಗಳನ್ನೂ ಹೋತಗಳನ್ನೂ ನ್ಯಾಯವಿಚಾರಣೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:17
6 ತಿಳಿವುಗಳ ಹೋಲಿಕೆ  

ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡಲೂ ವಾದಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು