Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:21 - ಕನ್ನಡ ಸತ್ಯವೇದವು J.V. (BSI)

21 [ಟಗರುಹೋತಗಳೇ,] ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿ ಬಿಟ್ಟಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ನಿಮ್ಮ ಶಕ್ತಿಯಿಂದ ಬೇರೆ ಕುರಿಗಳನ್ನು ದೂಡಿಬಿಡುವಿರಿ. ನಿಮ್ಮ ಕೊಂಬುಗಳಿಂದ ಬಲಹೀನ ಕುರಿಗಳನ್ನು ಹಾದುಬಿಡುವಿರಿ. ಅವುಗಳು ಆ ಸ್ಥಳದಿಂದ ಓಡಿಬಿಡುವಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:21
9 ತಿಳಿವುಗಳ ಹೋಲಿಕೆ  

ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು