Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:26 - ಕನ್ನಡ ಸತ್ಯವೇದವು J.V. (BSI)

26 ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:26
30 ತಿಳಿವುಗಳ ಹೋಲಿಕೆ  

ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೇ ಬೆಳೆಯನ್ನು ಕೊಡುವವು, ತೋಟದ ಮರಗಳು ಬಹಳ ಫಲಕೊಡುವವು;


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ಆ ದಿನದಲ್ಲಿ ಇಸ್ರಾಯೇಲು ಐಗುಪ್ತ ಅಶ್ಶೂರಗಳೊಂದಿಗೆ ಕಲೆತು ಈ ಮೂರೂ ಲೋಕದ ಮಧ್ಯದಲ್ಲಿ ಆಶೀರ್ವಾದದ ನಿಧಿಯಾಗುವವು.


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಎಲೈ ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಾರ್ಥವಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂವಿುಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು ಅಂದನು.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು