Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:5 - ಕನ್ನಡ ಸತ್ಯವೇದವು J.V. (BSI)

5 ಕುರುಬರು ಇರಲಿಲ್ಲವಾದದರಿಂದ ಅವು ಚದರಿಹೋದವು; ದಿಕ್ಕಾಪಾಲಾಗಿ ಕಾಡಿನ ಸಕಲಮೃಗಗಳಿಗೆ ತುತ್ತಾದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಬರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದ್ದರಿಂದ ಅವು ಚದರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:5
20 ತಿಳಿವುಗಳ ಹೋಲಿಕೆ  

ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.


ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು, ಕುರುಬರು ಇರಲಿಲ್ಲವಲ್ಲಾ, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲವಲ್ಲಾ, ಅವರು ಸ್ವಂತ ಹೊಟ್ಟೆಯನ್ನು ನೋಡಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವದಕ್ಕೆ ಬನ್ನಿರಿ!


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಬಾಗಲಿಂದ ಒಳಗೆ ಬರುವವನು ಆ ಕುರಿಗಳ ಕುರುಬನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ಆದದರಿಂದ ಅವರ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನಾಯಕನಾಗಿ ಅವರ ಮುಂದೆ ಹೊರಡುವದಕ್ಕೂ ಅವರನ್ನು ಹಿಂದಕ್ಕೆ ಕರಕೊಂಡು ಬರುವದಕ್ಕೂ ಒಬ್ಬ ಪುರುಷನನ್ನು ನೇವಿುಸಬೇಕೆಂದು ಬೇಡಿದನು.


ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು