ಯೆಹೆಜ್ಕೇಲನು 34:8 - ಕನ್ನಡ ಸತ್ಯವೇದವು J.V. (BSI)8 ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು, ಕುರುಬರು ಇರಲಿಲ್ಲವಲ್ಲಾ, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲವಲ್ಲಾ, ಅವರು ಸ್ವಂತ ಹೊಟ್ಟೆಯನ್ನು ನೋಡಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರಿರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ ಅಧ್ಯಾಯವನ್ನು ನೋಡಿ |