ಯೆಹೆಜ್ಕೇಲನು 35:11 - ಕನ್ನಡ ಸತ್ಯವೇದವು J.V. (BSI)11 ನೀನು ನನ್ನ ಜನರನ್ನು ದ್ವೇಷಿಸಿ ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತಿಮಾಡುವೆನು; ನಿನ್ನನ್ನು ದಂಡಿಸಿದಾಗ ನಾನು ಅವರಿಗೆ ಗೋಚರನಾಗುವೆನು, ಇದು ಕರ್ತನಾದ ಯೆಹೋನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಅಧ್ಯಾಯವನ್ನು ನೋಡಿ |