Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:13 - ಕನ್ನಡ ಸತ್ಯವೇದವು J.V. (BSI)

13 ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:13
30 ತಿಳಿವುಗಳ ಹೋಲಿಕೆ  

ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


[ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.


ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.


ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು.


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.


ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.


ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.


ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!


ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತಾಡಿದ್ದಾನೋ; ನಮ್ಮ ಮೂಲಕವೂ ಆತನು ಮಾತಾಡಲಿಲ್ಲವೇ ಎಂದು ಹೇಳಿಕೊಂಡರು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು