Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:14 - ಕನ್ನಡ ಸತ್ಯವೇದವು J.V. (BSI)

14 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳುಮಾಡಿ ಲೋಕವನ್ನೆಲ್ಲಾ ಸಂತೋಷಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಒಡೆಯನಾದ ಯೆಹೋವನ ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನ್ನನ್ನು ನಾಶಮಾಡುವಾಗ ಸಂತೋಷಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:14
5 ತಿಳಿವುಗಳ ಹೋಲಿಕೆ  

ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶನವನ್ನು ನೋಡಿ ಹರ್ಷಧ್ವನಿಗೈಯುವವು; ಏಕಂದರೆ ಹಾಳುಮಾಡುವವರು ಬಡಗಲಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು