Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:4 - ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಕಾಡಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡುವೆನು; ನೀನು ಬರಿದಾಗುವೆ. ನಾನು ಒಡೆಯನಾದ ಯೆಹೋವನೆಂದು ಆಗ ನೀನು ತಿಳಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:4
9 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು.


ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.


ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಈ ಸಾರಿ ನಾನು ನನ್ನ ವಶದಲ್ಲಿರುವ ಈತಿಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಅದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳುಕೊಳ್ಳುವಿ.


ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು