Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:6 - ಕನ್ನಡ ಸತ್ಯವೇದವು J.V. (BSI)

6 ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವುದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದ್ದರಿಂದ ಮರಣವು ನಿನ್ನನ್ನು ಓಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:6
12 ತಿಳಿವುಗಳ ಹೋಲಿಕೆ  

ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಬಡಿಯುವದು; ಅವರ ರಕ್ತಪ್ರವಾಹದಿಂದ ಗುಡ್ಡಗಳು ಕರಗುವವು.


ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನಿಂದ ತುಂಬುವವು.


ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳುಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು