Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:9 - ಕನ್ನಡ ಸತ್ಯವೇದವು J.V. (BSI)

9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:9
16 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಕಾಡಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ಶಪಿಸುವದು ಇಷ್ಟವಾಗಿದ್ದದರಿಂದ ಅದು ಅವನಿಗೆ ಬಂತು; ಆಶೀರ್ವದಿಸುವದು ಇಷ್ಟವಲ್ಲದ್ದರಿಂದ ಅದು ಅವನಿಗೆ ದೂರವಾಯಿತು.


ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ ಎಂಬದಾಗಿ ಅರಿಕೆಮಾಡಬೇಕು.


ಎದೋಮೂ ಅದರ ಅರಸರೂ ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ಒರಗಿ ಹೋಗಿದ್ದಾರೆ.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.


ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು