Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:1 - ಕನ್ನಡ ಸತ್ಯವೇದವು J.V. (BSI)

1 ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:1
13 ತಿಳಿವುಗಳ ಹೋಲಿಕೆ  

ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ ಭಿನ್ನರಾಜ್ಯದವರಾಗಿಯೂ ಇರರು;


ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಎಲುಬುಗಳ ಮೇಲೆ ಧ್ವನಿಯನ್ನು ಹರಡಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.


ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ಶತ್ರುವು ನಿಮ್ಮನ್ನು ನೋಡಿ ಆಹಾ, ಎನ್ನುತ್ತಾ ಈ ಪುರಾತನದುರ್ಗಗಳು ನಮ್ಮ ವಶವಾಗಿವೆ ಎಂದು ಹಿಗ್ಗಿಕೊಂಡದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು -


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು