Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:12 - ಕನ್ನಡ ಸತ್ಯವೇದವು J.V. (BSI)

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:12
12 ತಿಳಿವುಗಳ ಹೋಲಿಕೆ  

ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ ಎಂದು ನಿನ್ನನ್ನು ಬಯ್ಯುತ್ತಾರಲ್ಲಾ;


ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.


ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು;


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು.


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು