ಯೆಹೆಜ್ಕೇಲನು 36:18 - ಕನ್ನಡ ಸತ್ಯವೇದವು J.V. (BSI)18 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು. ಅಧ್ಯಾಯವನ್ನು ನೋಡಿ |
ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.