Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:2 - ಕನ್ನಡ ಸತ್ಯವೇದವು J.V. (BSI)

2 ಶತ್ರುವು ನಿಮ್ಮನ್ನು ನೋಡಿ ಆಹಾ, ಎನ್ನುತ್ತಾ ಈ ಪುರಾತನದುರ್ಗಗಳು ನಮ್ಮ ವಶವಾಗಿವೆ ಎಂದು ಹಿಗ್ಗಿಕೊಂಡದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:2
13 ತಿಳಿವುಗಳ ಹೋಲಿಕೆ  

ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;


ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,


ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ


ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಆತನು ತನ್ನ ಆಲಯವನ್ನು ಪರ್ವತದಂತೆಯೂ ತಾನು ಸ್ಥಾಪಿಸಿದ ಭೂವಿುಯಂತೆಯೂ ಶಾಶ್ವತವಾಗಿ ಕಟ್ಟಿದನು.


ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋವಿುನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದಿಂದುರಿಯುತ್ತಾ ಶಪಿಸೇ ಶಪಿಸಿದ್ದೇನೆ;


ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.


ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಸೊತ್ತಿಗೆ ನೀನು ಕೈಹಾಕಬಾರದಾಗಿತ್ತು;


ನನ್ನ ದೇವರೇ, ಅವರನ್ನು ಗಾಳಿಯಲ್ಲಿ ಸುತ್ತಿಯಾಡುವ ಧೂಳಿನಂತೆಯೂ ಹಾರಿಹೋಗುವ ಹೊಟ್ಟಿನಂತೆಯೂ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು