Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:21 - ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ ವಂಶದವರು ಜನಾಂಗಗಳೊಳಗೆ ಸೇರಿ ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮವನ್ನು ಕುರಿತು ನಾನು ಮರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲ್ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು, ನಾನು ಮರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಇಸ್ರೇಲರು ತಾವು ಹೋದ ದೇಶಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದರು. ಆದ್ದರಿಂದ ನನ್ನ ಹೆಸರನ್ನು ಕುರಿತಾಗಿ ದುಃಖಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:21
10 ತಿಳಿವುಗಳ ಹೋಲಿಕೆ  

ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು ನನ್ನ ಕೀರ್ತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರನಾಮವನ್ನು ಕೀರ್ತಿಸಿರಿ.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು