Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:22 - ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನ್ನು ನಿಲ್ಲಿಸುವುದಕ್ಕೆ ಎನುಬೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನ್ನು ನಿನ್ನ ಹೆಸರಿಗೋಸ್ಕರ ಮಾಡದೆ ನನ್ನ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:22
15 ತಿಳಿವುಗಳ ಹೋಲಿಕೆ  

ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಕೆಡಬಾರದಷ್ಟೆ; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು