Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:24 - ಕನ್ನಡ ಸತ್ಯವೇದವು J.V. (BSI)

24 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:24
22 ತಿಳಿವುಗಳ ಹೋಲಿಕೆ  

ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರೇ, ನೋಡಿರಿ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ ಇಸ್ರಾಯೇಲ್ ದೇಶಕ್ಕೆ ಸೇರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು