Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:25 - ಕನ್ನಡ ಸತ್ಯವೇದವು J.V. (BSI)

25 ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:25
38 ತಿಳಿವುಗಳ ಹೋಲಿಕೆ  

ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಹೊಲಸಿನಿಂದ ಉದ್ಧರಿಸಿ ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು ಎಣಿಸಿಕೊಳ್ಳುವ ಬೇರೊಂದು ತರದವರುಂಟು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು.


ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು