ಯೆಹೆಜ್ಕೇಲನು 36:32 - ಕನ್ನಡ ಸತ್ಯವೇದವು J.V. (BSI)32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.