Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:38 - ಕನ್ನಡ ಸತ್ಯವೇದವು J.V. (BSI)

38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:38
23 ತಿಳಿವುಗಳ ಹೋಲಿಕೆ  

ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.


ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.


ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲ್ಯರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ನೆರೆಯಬೇಕು.


ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು.


ಅಲ್ಲಿ ದೇವಾಲಯದೊಳಗೆ ದನ ಕುರಿ ಪಾರಿವಾಳ ಮಾರುವವರನ್ನೂ ಕೂತಿರುವ ಚಿನಿವಾರರನ್ನೂ ಕಂಡು ಹಗ್ಗದಿಂದ ಕೊರಡೆ ಮಾಡಿ


ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಬಡಗಣ ಬಾಗಿಲಿಂದ ಆರಾಧಿಸುವದಕ್ಕೆ ಪ್ರವೇಶಿಸಿದವನು ತೆಂಕಣ ಬಾಗಿಲಿಂದ ಹೊರಡಲಿ; ತೆಂಕಣ ಬಾಗಿಲಿಂದ ಪ್ರವೇಶಿಸಿದವನು ಬಡಗಣ ಬಾಗಿಲಿಂದ ಹೊರಡಲಿ; ತಾನು ಪ್ರವೇಶಿಸಿದ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು