Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:5 - ಕನ್ನಡ ಸತ್ಯವೇದವು J.V. (BSI)

5 ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋವಿುನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದಿಂದುರಿಯುತ್ತಾ ಶಪಿಸೇ ಶಪಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:5
32 ತಿಳಿವುಗಳ ಹೋಲಿಕೆ  

ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ;


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ಮಾತಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಲ್ಲಾ!


ಯೆಹೋವನು ತನ್ನ ಜನರಾದ ಇಸ್ರಾಯೇಲ್ಯರಿಗೆ ದಯಪಾಲಿಸಿದ ಸ್ವಾಸ್ತ್ಯಕ್ಕೆ ಕೈ ಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ ಹೀಗೆ ಹೇಳುತ್ತಾನೆ - ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು