Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:19 - ಕನ್ನಡ ಸತ್ಯವೇದವು J.V. (BSI)

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ದಂಡವನ್ನು ನಾನು ತೆಗೆದು ಯೆಹೂದದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು ಎಂಬದನ್ನು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ನೀನು ಅವರಿಗೆ, “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ಇಗೋ, ಎಫ್ರಯಿಮು ಹಿಡಿದಿರುವ ದಂಡವನ್ನು ಅಂದರೆ, ಜೋಸೆಫನ ಮತ್ತು ಜೋಸೆಫನಿಗೆ ಸೇರಿದ ಇಸ್ರಯೇಲ್ ಕುಲಗಳ ದಂಡವನ್ನು ನಾನು ತೆಗೆದು ಜುದೇಯದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು’ ಎಂಬುದನ್ನು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯೀಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಟ್ಟು ಒಂದೇ ದಂಡವಾಗುವಂತೆ ಮಾಡುವೆನು. ಅವು ನನ್ನ ಕೈಯಲ್ಲಿ ಒಂದೇ ದಂಡವಾಗುತ್ತವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:19
8 ತಿಳಿವುಗಳ ಹೋಲಿಕೆ  

ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನಿನ್ನ ಜನರು - ಇದೇನು? ನಮಗೆ ತಿಳಿಸುವದಿಲ್ಲವೋ ಎಂದು ನಿನ್ನನ್ನು ಕೇಳುವಲ್ಲಿ ನೀನು ಅವರಿಗೆ -


ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು