Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:2 - ಕನ್ನಡ ಸತ್ಯವೇದವು J.V. (BSI)

2 ನಾನು ಆ ಎಲುಬುಗಳ ಮಧ್ಯೆ ತಗ್ಗನ್ನು ಬಳಸಿಕೊಂಡು ಬರುವಂತೆ ಮಾಡಿದನು; ಇಗೋ, ತಗ್ಗಿನ ಮೇಲೆಲ್ಲಾ ತೀರಾ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:2
5 ತಿಳಿವುಗಳ ಹೋಲಿಕೆ  

ಒಬ್ಬನು ಹೊಲವನ್ನು ಉತ್ತು ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ


ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು