ಯೆಹೆಜ್ಕೇಲನು 37:23 - ಕನ್ನಡ ಸತ್ಯವೇದವು J.V. (BSI)23 ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿ |