Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:5 - ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಹೊಗಿಸುವೆನು; ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ನಾನು ನಿಮಗೆ ಉಸಿರನ್ನು ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:5
9 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ.


ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ - ಪವಿತ್ರಾತ್ಮವರವನ್ನು ತಕ್ಕೊಳ್ಳಿರಿ;


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು