Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:1
8 ತಿಳಿವುಗಳ ಹೋಲಿಕೆ  

ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು.


ನರಪುತ್ರನೇ, ರೋಷಿನವರನ್ನೂ ಮೆಷೆಕಿನವರನ್ನೂ ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ -


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು