Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:12 - ಕನ್ನಡ ಸತ್ಯವೇದವು J.V. (BSI)

12 ಸೂರೆಗೆಯ್ದು ಕೊಳ್ಳೆಹೊಡೆಯಬೇಕೆಂತಲೂ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಒಟ್ಟುಗೂಡಿ ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸ್ವತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಬಲಾಢ್ಯ ದೇಶಗಳು ಬೇರೆ ಬಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಬೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:12
14 ತಿಳಿವುಗಳ ಹೋಲಿಕೆ  

ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಮತ್ತೊಮ್ಮೆ ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.


ಅವನು ತಿರಿಗಿ - ನೋಡು, ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು