Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:15 - ಕನ್ನಡ ಸತ್ಯವೇದವು J.V. (BSI)

15 ನೀನು ನಿನ್ನ ಸ್ಥಳವನ್ನು ಬಿಟ್ಟು ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹು ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟ ಕಡೆಯಿಂದ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಹು ದೂರದ ಉತ್ತರದಿಕ್ಕಿನಲ್ಲಿರುವ ನಿನ್ನ ಸ್ಥಳದಿಂದ ಬರುವೆ. ನೀನು ಬಹಳ ಜನರನ್ನು ನಿನ್ನ ಸಂಗಡ ಕರೆತರುವೆ. ಅವರೆಲ್ಲಾ ಕುದುರೆಗಳ ಮೇಲೆ ಬರುವರು. ನೀವು ಅತಿ ದೊಡ್ಡ ಮತ್ತು ಬಲಾಢ್ಯ ಸೈನ್ಯವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:15
13 ತಿಳಿವುಗಳ ಹೋಲಿಕೆ  

ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ


ಇವರನ್ನು ಗುವ್ಮಿುಗುವ್ಮಿುಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗುವ್ಮಿುಗುವ್ಮಿುಯಾದ ತೋಗರ್ಮದವರನ್ನು ಅಂತು ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು


ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು