Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:20 - ಕನ್ನಡ ಸತ್ಯವೇದವು J.V. (BSI)

20 ಸಮುದ್ರಮತ್ಸ್ಯಗಳು ಆಕಾಶಪಕ್ಷಿಗಳು ಭೂಜಂತುಗಳು ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಭೂಮಂಡಲದ ಸಕಲಮನುಷ್ಯರೂ ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವವು, ಜರಿಗಳು ಕವಚಿಕೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:20
9 ತಿಳಿವುಗಳ ಹೋಲಿಕೆ  

ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು