Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:3 - ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನಿಗೆ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶದ ಅತ್ಯಂತ ಪ್ರಮುಖ ನಾಯಕನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:3
8 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ;


ನರಪುತ್ರನೇ, ರೋಷಿನವರನ್ನೂ ಮೆಷೆಕಿನವರನ್ನೂ ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ -


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು