Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:1 - ಕನ್ನಡ ಸತ್ಯವೇದವು J.V. (BSI)

1 ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:1
12 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ಕಾಣಿಸುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.


ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ;


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು