ಯೆಹೆಜ್ಕೇಲನು 39:11 - ಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ನಾನು ಇಸ್ರಾಯೇಲಿನೊಳಗೆ ಲವಣ ಸಮುದ್ರದ ಮೂಡಣ ದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ತಗ್ಗನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ಗೋಗನ ಸಮೂಹದ ತಗ್ಗು ಅನ್ನಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು. ಅಧ್ಯಾಯವನ್ನು ನೋಡಿ |