Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:3
10 ತಿಳಿವುಗಳ ಹೋಲಿಕೆ  

ಅಲ್ಲಿ ಆತನು ವಿುಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ ಖಡ್ಗ ಮುಂತಾದ ಯುದ್ಧಾಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ.


ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆಸುತ್ತಿ ಅದನ್ನು ಬಿಗಿಸಲಿಲ್ಲ.


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ


ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;


ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.


ತೇಜೋಮಯನು ನೀನು; ಬೆಟ್ಟಗಳಲ್ಲಿ ಕೊಳ್ಳೆಹೊಡೆದದರಿಂದ ಹೆಸರುಗೊಂಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು