Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:8 - ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ ಬಂತು, ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:8
10 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹುವರುಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಾಯೇಲ್ಯರ ಮೇಲೆ ಬೀಳಮಾಡುವೆನು ಎಂದು ಮುಂತಿಳಿಸಿದ್ದರಷ್ಟೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.


ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬೈಲಿಗೆ ಹೊರಟು ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರುಷಗಳ ತನಕ ಸುಡುತ್ತಲೇ ಬರುವರು;


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು