Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:17 - ಕನ್ನಡ ಸತ್ಯವೇದವು J.V. (BSI)

17 ಅವರಲ್ಲಿ ಪ್ರತಿಯೊಬ್ಬರೂ ಅನ್ನನೀರಿನ ಕೊರತೆಗೊಳಪಟ್ಟು ಸ್ತಬ್ಧರಾಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:17
7 ತಿಳಿವುಗಳ ಹೋಲಿಕೆ  

ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು