Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:2 - ಕನ್ನಡ ಸತ್ಯವೇದವು J.V. (BSI)

2 ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:2
12 ತಿಳಿವುಗಳ ಹೋಲಿಕೆ  

ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ಯೋವಾಬನ ಕಡೆಯವರು ಆಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ಊರುಗೋಡೆಗೆ ತಗಲುವ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಕೆಡವಿಬಿಡುವದಕ್ಕೆ ಪ್ರಯತ್ನಿಸಿದರು.


ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಉತ್ತರರಾಜನು ಬಂದು ದಿಬ್ಬಹಾಕಿ ಕೋಟೆಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.


ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲೆದುರಿಗೆ ವ್ಯೂಹಕಟ್ಟಿದರು.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು