ಯೆಹೆಜ್ಕೇಲನು 4:3 - ಕನ್ನಡ ಸತ್ಯವೇದವು J.V. (BSI)3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ. ಅಧ್ಯಾಯವನ್ನು ನೋಡಿ |