Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ, ಇಸ್ರಾಯೇಲ್ ವಂಶದವರ ಅಧರ್ಮದ ಭಾರವು ಅದರ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆಮೇಲೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡಮಗ್ಗುಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ನಿನ್ನ ಎಡಗಡೆಯಲ್ಲಿ ಮಲಗಿ, ಇಸ್ರಾಯೇಲಿನ ಜನರ ಅಕ್ರಮಗಳನ್ನು ನಿಮ್ಮ ಮೇಲಿಡಬೇಕು. ನೀನು ಎಡಗಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ನಿಮ್ಮ ಮೇಲೆ ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:4
11 ತಿಳಿವುಗಳ ಹೋಲಿಕೆ  

ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.


ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.


ಅವರು ಎಷ್ಟು ವರುಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ ಮುನ್ನೂರತೊಂಭತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇವಿುಸಿದ್ದೇನೆ; ಅಷ್ಟು ದಿವಸ ಇಸ್ರಾಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಾಲ್ವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ, ನಾಲ್ವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು