Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:7 - ಕನ್ನಡ ಸತ್ಯವೇದವು J.V. (BSI)

7 ನಿನ್ನ ತೋಳಿಗೆ ಹೊದಿಕೆಯಿಲ್ಲದೆ ಮುತ್ತಿಗೆಯಾದ ಯೆರೂಸಲೇವಿುನ ಕಡೆಗೆ ಮೋರೆ ತಿರುಗಿಸಿ ಅದರ ವಿಷಯವಾಗಿ ಅಶುಭವನ್ನು ಪ್ರಕಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನ್ನ ಬಟ್ಟೆಯ ತೋಳನ್ನು ಮೇಲಕ್ಕೆ ಮಡಿಚಿ ನಿನ್ನ ಕೈಯನ್ನು ಇಟ್ಟಿಗೆಯ ಮೇಲೆ ಚಾಚು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:7
6 ತಿಳಿವುಗಳ ಹೋಲಿಕೆ  

ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು -


ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ -


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.


ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು