ಯೆಹೆಜ್ಕೇಲನು 40:1 - ಕನ್ನಡ ಸತ್ಯವೇದವು J.V. (BSI)1 ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. ಅಧ್ಯಾಯವನ್ನು ನೋಡಿ |