Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:10 - ಕನ್ನಡ ಸತ್ಯವೇದವು J.V. (BSI)

10 ಮೂಡಣ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವುಕಂಬಗಳೂ ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವು ಕಂಬಗಳೂ ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದ್ವಾರದ ಎರಡು ಬದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:10
6 ತಿಳಿವುಗಳ ಹೋಲಿಕೆ  

ಅಲ್ಲಿ [ಗೋಡೆಯಲ್ಲಿದ್ದ] ಒಂದೊಂದು ಕೋಣೆಯ ಉದ್ದ ಒಂದು ಕೋಲು, ಅಗಲ ಒಂದು ಕೋಲು; ಆ ಗೋಡೇಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಲಿನ ಅಗಲವು ಒಂದು ಕೋಲು.


ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ಎಂಟು ಮೊಳ; ನಿಲವುಕಂಬಗಳ ಅಗಲವು ಎರಡೆರಡು ಮೊಳ; ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.


ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು; ಅಗಲ ಹತ್ತು ಮೊಳ; ಉದ್ದ ಹದಿಮೂರು ಮೊಳ;


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಅದರೊಳಗೆ ಎರಡು ಕಡೆ ಗೋಡೇಕೋಣೆಗಳು ಮೂರುಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು