Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:20 - ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಹೊರಗಣ ಪ್ರಾಕಾರದ ಬಡಗಣ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಹೊರಗಣ ಪ್ರಾಕಾರದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:20
6 ತಿಳಿವುಗಳ ಹೋಲಿಕೆ  

ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.


ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಆಮೇಲೆ ಅವನು ನನ್ನನ್ನು ತೆಂಕಲಿಗೆ ಕರತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು.


ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು


ಬಳಿಕ ಆ ಪುರುಷನು ಬಡಗಣ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರತಂದನು; ಆಹಾ, ನಾನು ನೋಡಲಾಗಿ ಯೆಹೋವನ ತೇಜಸ್ಸು ಯೆಹೋವನ ಆಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು