Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:29 - ಕನ್ನಡ ಸತ್ಯವೇದವು J.V. (BSI)

29 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29-30 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:29
15 ತಿಳಿವುಗಳ ಹೋಲಿಕೆ  

ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು.


ಅಲ್ಲಿ [ಗೋಡೆಯಲ್ಲಿದ್ದ] ಒಂದೊಂದು ಕೋಣೆಯ ಉದ್ದ ಒಂದು ಕೋಲು, ಅಗಲ ಒಂದು ಕೋಲು; ಆ ಗೋಡೇಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಲಿನ ಅಗಲವು ಒಂದು ಕೋಲು.


ಮೂಡಣ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವುಕಂಬಗಳೂ ಒಂದೇ ಅಳತೆಯಾಗಿದ್ದವು.


ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಆರಾರು ಮೊಳ.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು.


ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕು ಕಂಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು