Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:34 - ಕನ್ನಡ ಸತ್ಯವೇದವು J.V. (BSI)

34 ಅದರ ಕೈಸಾಲೆಯು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದರ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು. ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಇಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:34
7 ತಿಳಿವುಗಳ ಹೋಲಿಕೆ  

ಅಲ್ಲಿನ ಕಿಟಕಿಗಳೂ ಕೈಸಾಲೆಯೂ [ಚಿತ್ರಿತವಾಗಿದ್ದ] ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲಿನವುಗಳ ಅಳತೆಯಷ್ಟಿದ್ದವು; ಏಳು ಮೆಟ್ಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆಯು ಒಳಗಡೆಯಿತ್ತು.


ಅದರ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.


ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.


ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು; ಹತ್ತು ಮೆಟ್ಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.


ಅಲ್ಲಿ ಹತ್ತುವದಕ್ಕೆ ಏಳು ಮೆಟ್ಲುಗಳಿದ್ದವು; ಕೈಸಾಲೆಯು ಒಳಗಡೆಯಿತ್ತು; ಕೈಸಾಲೆಯ ಎದುರುಬದುರಿನ ನಿಲವು ಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು.


ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು