ಯೆಹೆಜ್ಕೇಲನು 40:37 - ಕನ್ನಡ ಸತ್ಯವೇದವು J.V. (BSI)37 ಅದರ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಅಧ್ಯಾಯವನ್ನು ನೋಡಿ |