Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:39 - ಕನ್ನಡ ಸತ್ಯವೇದವು J.V. (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:39
22 ತಿಳಿವುಗಳ ಹೋಲಿಕೆ  

ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.


ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.


ಇದಲ್ಲದೆ ಸರ್ವಾಂಗಹೋಮಕ್ಕೆ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದು ಮೊಳ; ಅವುಗಳ ಮೇಲೆ ಸರ್ವಾಂಗಹೋಮಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು.


ಬಡಗಣ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಲುಗಳ ಹತ್ತಿರ ಆ ಬಾಗಿಲ ಕೈಸಾಲೆಯ ಹೊರಗೆ ಒಂದು ಕೊನೆಯಲ್ಲಿ ಎರಡು ಪೀಠಗಳು, ಇನ್ನೊಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.


ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.


ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.


ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು